Tuesday, May 21, 2024
Homeಕರಾವಳಿಮೇ 14 ಹಾಗೂ 15 ರಂದು ಮಂಗಳೂರು ವಿಶ್ವ ವಿದ್ಯಾನಿಲಯದಲ್ಲ ಉದ್ಯೋಗ ಮೇಳ

ಮೇ 14 ಹಾಗೂ 15 ರಂದು ಮಂಗಳೂರು ವಿಶ್ವ ವಿದ್ಯಾನಿಲಯದಲ್ಲ ಉದ್ಯೋಗ ಮೇಳ

spot_img
- Advertisement -
- Advertisement -

ಮಂಗಳೂರು : ಮೇ 14 ಮತ್ತು 15ರಂದು ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ , ತರಬೇತಿ ಮತ್ತು ನಿಯೋಜನಾ ಘಟಕಗಳು ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳ ಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಮ್ಯಾಜಿಕ್ ಬಸ್ನ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್ ಮ್ಯಾನೇಜರ್ ಚಿರಂಜೀವಿ ಅಂಬರ್‌ನಾಥ್ ಮೇ 14 ರಂದು ಬೆಳಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ನಗರದ ಮಂಗಳಾ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಸುಮಾರು 40 ಕಂಪೆನಿಗಳು ಭಾಗವಹಿಸಲಿದೆ. ಸುಮಾರು 11,100 ಹುದ್ದೆಗಳಿಗೆ ಅರ್ಹರ ನೇಮಕಾತಿ ನಡೆಯಲಿದೆ. ಯುಇಐಜಿಬಿ ಮತ್ತು ಯುಟಿಪಿಸಿ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ, ಸಂಯೋಜಿತ, ಸ್ವಾಯತ್ತ ಕಾಲೇಜುಗಳಿಂದ ಮತ್ತು ಮಂಗಳೂರು ವಿವಿ ಕ್ಯಾಂಪಸ್‌ನ ವಿದ್ಯಾರ್ಥಿಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಅದನ್ನು ಮ್ಯಾಜಿಕ್ ಬಸ್ ಎಂಬ ಸರಕಾರೇತರ ಸಂಸ್ಥೆಗೆ ಹಸ್ತಾಂತರಿಸಿದೆ. ಸಂಸ್ಥೆಯು ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಟೋಕನ್ ಒದಗಿಸಿ ನೇಮಕಾತಿಗೆ ನೇರ ಸಂದರ್ಶನ ನಡೆಸಲಿದೆ. ಕನಿಷ್ಠ ವೇತನ ರೂ. 10 ಸಾವಿರ ರೂ. ಇರಲಿದೆ.

ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಬಯೋಡಾಟ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಫೋಟೋ, ಎಸೆಸೆಲ್ಸಿ ಅಂಕಪಟ್ಟಿಯ ಜೊತೆಗೆ ಗರಿಷ್ಠ ಅರ್ಹತೆಯ ಅಂಕಪಟ್ಟಿಯನ್ನು ತರಬೇಕು. ಅಂತಿಮ ವರ್ಷದ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವವರೂ (೨೦೨೧-೨೨) ಸಂದರ್ಶನಕ್ಕೆ ಹಾಜರಾಗಬಹುದು.

ಮಂಗಳೂರು ವಿಶ್ವವಿದ್ಯಾನಿಲಯದ ಹ್ಯುಮಾನಿಟೀಸ್ (ಮಾನವಿಕ), ಮ್ಯಾನೇಜ್ಮೆಂಟ್ (ನಿರ್ವಹಣೆ), ಸೈನ್ಸ್ (ವಿಜ್ಞಾನ) ಮತ್ತು ಲೆಕ್ಚರ್ ಕಾಂಪ್ಲೆಕ್ಸ್‌ಗಳನ್ನು ಉದ್ಯೋಗ ಮೇಳಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಪ್ರತಿಯೊಂದರಲ್ಲೂ ಸಹಾಯವಾಣಿ ಇರಲಿದೆ. 80ಕ್ಕೂ ಹೆಚ್ಚು ಸ್ವಯಂಸೇವಕರನ್ನು ನೇಮಿಸಲಾಗಿದೆ. ಉದ್ಯೋಗದಾತ ಕಂಪನಿಗಳ ಸಿಬ್ಬಂದಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗುವುದು. ಸುಗಮ ಸಾರಿಗೆ ಸಂಚಾರಕ್ಕೂ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಾರದಾ ಹೆಚ್. ಸೋಮಯಾಜಿ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ (ಮೊ,ಸಂ: 63630 22303) ಅಥವಾ ಗುರುಪ್ರಸಾದ್ ಟಿ.ಎನ್. ವಿವಿ ಕಾಲೇಜು (ಮಾಧ್ಯಮ ಸಂಬಂಧಿತ) ಮೊ.ಸಂ:99649 39267ನ್ನು ಸಂಪರ್ಕಿಸಬಹುದು.

- Advertisement -
spot_img

Latest News

error: Content is protected !!