ಬೆಂಗಳೂರು : ರಾಜ್ಯ ಪೋಲೀಸ್ ಇಲಾಖೆಯು ಅಗತ್ಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚಿಸಿದ್ದು, ಜಾಹಿರಾತು ಪ್ರಕಟಣೆ ಮಾಡಿದೆ. ಎಸ್‌ಐ, ಆರ್‌ಎಸ್‌ಐ, ಎಸ್‌ಆರ್‌ಎಸ್‌ಐ ಮತ್ತು ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಉದ್ಯೋಗ ಅಧಿಸೂಚನೆ ಹೊರಡಿಸಿದೆ. ಖಾಲಿ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.250.
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100.
ಆನ್‌ಲೈನ್ ಅರ್ಜಿ ಸಲ್ಲಿಕೆ ನಂತರ ಬರುವಅರ್ಜಿ ಶುಲ್ಕ ಚಲನ್ ನೊಂದಿಗೆ ಅಧಿಕೃತ ಬ್ಯಾಂಕ್ ಶಾಖೆಗಳ ಅಥವಾ ಅಂಚೆ ಕಛೇರಿಗಳಲ್ಲಿ ಪಾವತಿಸ ಬಹುದಾಗಿದೆ.
ಹುದ್ದೆಗಳ ವಿವರ
ಆರ್‌ಎಸ್‌ಐ 45 (ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್)
ಎಸ್‌ಆರ್‌ಎಸ್‌ಐ 40 (KSRP)
ಎಸ್‌ಐ 51 (ವೈರ್‌ಲೆಸ್)
ಪಿಎಸ್‌ಐ 26 K.S.I.S.F
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-05-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2020
ಅರ್ಜಿ ಸಲ್ಲಿಸೋದು ಹೇಗೆ? :
ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ 18-05-2020 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.



