ಬೆಳ್ತಂಗಡಿ: ಕೃಷಿ ಚಟುವಟಿಕೆಗಳನ್ನು ಈ ಭಾರಿಯ ಲಾಕ್ ಡೌನಿನ ನಿಷೇದಾಜ್ಞೆಯಿಂದ ಹೊರಗಿಡಲಾಗಿದೆ. ಇದರೊಂದಿಗೆ ಎಪ್ರಿಲ್ 20ರ ನಂತರ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಉದ್ಧೇಶದಿಂದ ಕಟ್ಟಡ, ರಸ್ತೆ, ಸೇತುವೆ ಮುಂತಾದ ನಿರ್ಮಾಣ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಇದರೊಂದಿಗೆ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸಲು ಗ್ರಾಮ ಪಂಚಾಯತುಗಳಿಗೆ ಸೂಚಿಸಲಾಗಿದ್ದು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮೂಲಕ ಗ್ರಾಮಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ಸದಸ್ಯರಿಗೂ ಉದ್ಯೋಗ ಸಿಗುವಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಬೆಳ್ತಂಗಡಿಯ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.
ಟಾಸ್ಕ್ ಫೋರ್ಸ್ ಸದಸ್ಯರು ಗ್ರಾಮಗಳಲ್ಲಿರುವ ಕೂಲಿಕಾರ್ಮಿಕರನ್ನು ಗುರುತಿಸಿ, ಅವರಿಗೆ ಸೂಕ್ತ ಕೆಲಸ ದೊರಕಿಸಿಕೊಡಲು ತೋಟದ ಮಾಲೀಕರು ಹಾಗೂ ಕಾಮಗಾರಿಗಳ ಗುತ್ತಿಗೆದಾರರೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ. ಅಂತೆಯೇ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಹೆಚ್ಚು ಜನರಿಗೆ ಉದ್ಯೋಗ ದೊರಕಿಸಿ, ಇದರ ಸವಲತ್ತುಗಳನ್ನು ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ವಿವರಿಸಿರುವ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಈ ಎಲ್ಲ ಸಂದರ್ಭಗಳಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೋರಿರುತ್ತಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಮಿಕರಿಗೆ ಉದ್ಯೋಗ್ಯ ಭಾಗ್ಯ: ತಹಶೀಲ್ದಾರ್ ಗಣಪತಿ ಶಾಸ್ತ್ರಿ
- Advertisement -
- Advertisement -
- Advertisement -