- Advertisement -
![]()
- Advertisement -
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಮೇ.1ರಿಂದ ಅವಕಾಶ ಕಲ್ಪಿಸಲಾಗಿದೆ.
ಜೋಗ ಜಲಪಾತ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಏಪ್ರಿಲ್.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಇದೀಗ ಈ ಕಾಮಗಾರಿಯು ಸಂಪೂರ್ಣವಾಗಿ ಮುಗಿದಿರುವ ಹಿನ್ನೆಲೆಯಲ್ಲಿ ಮೇ.1ರಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


