- Advertisement -
- Advertisement -
ಬೆಂಗಳೂರು: ಯಾವುದೇ ಷರತ್ತು ಇಲ್ಲದೇ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಪ್ರಮೋದ್ ಮಧ್ವರಾಜ್, ದೇಶದಲ್ಲಿ ಈಗಾಗಲೇ ಬಿಜೆಪಿ ಬಲಿಷ್ಠವಾಗಿದೆ, ಮತ್ತಷ್ಟು ಬಲಿಷ್ಟಗೊಳಿಸಲು ಬಿಜೆಪಿ ಸೇರಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಸಿದ್ದಾಂತ ಮೆಚ್ಚಿದ್ದು ಯಾವುದೇ ಷರತ್ತು ಹಾಕಿಲ್ಲ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪ್ರಮೋದ್ ಮಧ್ವರಾಜ್, ಸಂಜೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
- Advertisement -