Saturday, August 29, 2026
Homeತಾಜಾ ಸುದ್ದಿಜ. 22 ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ

ಜ. 22 ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ

- Advertisement -
- Advertisement -

ಬೆಂಗಳೂರು: ಜನವರಿ 22 ರಿಂದ 31 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದೆ‌. ಬೆಂಗಳೂರಿನಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಜಂಟಿ ಅಧಿವೇಶನ ನಡೆಸಲು ತೀರ್ಮಾನ ತೆಗೆದುಕೊಂಡಿದೆ.

ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಒಟ್ಟು ಐದು ದಿನಗಳ ಕಾಲ ನಡೆಯುವ ಜಂಟಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ಬಿಜೆಪಿ ಟೀಕಿಸಿದ್ದು, ಡ್ರಗ್ಸ್ ಮಾಫಿಯಾ, ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಹಿನ್ನೆಡೆ, ಕಾನೂನು ಮತ್ತು ಸುವ್ಯವಸ್ಥೆ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!