- Advertisement -
![]()
- Advertisement -
ಬೆಳ್ತಂಗಡಿ: ಪತ್ರಕರ್ತ,ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದ್ದಾರೆ.
ಕಳೆದ ಭಾನುವಾರ ಅಸೌಖ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.. ಅವರು ಪುತ್ರ ಭುವನೇಶ್, ಸೊಸೆ, ಮೊಮ್ಮಕ್ಕಳು, ಸಹೋದರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ ಗೇರುಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
- Advertisement -


