Wednesday, June 24, 2026
Homeಕರಾವಳಿಮಂಗಳೂರುಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ

- Advertisement -
- Advertisement -

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಲು ಮನವಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ವಿಧಾ‌ನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾ‌ನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವಿ. ಸುನೀಲ್ ಕುಮಾರ್, ಹರೀಶ್ ಪೂಂಜ, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಬಿಜೆಪಿ ಶಾಸಕರು ನಿಯೋಗದಲ್ಲಿ ಪಾಲ್ಗೊಂಡಿದ್ದರು.

ಅಲ್ಲೇ ಸುಹಾಸ್ ಶೆಟ್ಟಿ ತಂದೆ ಮತ್ತು ತಾಯಿ ಹಾಗೂ ಮಾವ ರಾಜೇಶ್ ಭಂಡಾರಿ ಕೂಡಾ ಬಿಜೆಪಿ ನಿಯೋಗದ ಜೊತೆ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.ರಾಜ್ಯಪಾಲರಿಗೆ ಸಲ್ಲಿಸಿರುವ ನಾಲ್ಕು ಪುಟಗಳ ಲಿಖಿತ ದೂರಿನಲ್ಲಿ ಎನ್ ಐಎ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.

- Advertisement -

Latest News

error: Content is protected !!