ನವದೆಹಲಿ: ಒಗ್ಗಟ್ಟು ಪ್ರದರ್ಶನಕ್ಕಾಗಿ ಒಂದು ಹೊತ್ತಿನ ಊಟ ಬಿಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಲಾಕ್ ಡೌನ್ ವೇಳೆಯಲ್ಲಿ ಒಂದು ಹೊತ್ತಿನ ಊಟ ಬಿಡುವಂತೆ ಅವರು ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಈ ಕುರಿತಾಗಿ ಅವರು ಸಲಹೆ ನೀಡಿದ್ದಾರೆ. ಪಕ್ಷದ ಕಚೇರಿ, ಕಾರ್ಯಕರ್ತರ ಮನೆ ಮೇಲೆ ಬಾವುಟ ಹಾರಿಸಬೇಕು. ಬಾವುಟ ಹಾರಿಸುವಾಗ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಸಂಕಷ್ಟದಲ್ಲಿರುವವರ ಜೊತೆಗೆ ಪಕ್ಷದ ಕಾರ್ಯಕರ್ತರು ಇರಬೇಕು. ಅವರಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ.
ಬಿಜೆಪಿ 40 ವರ್ಷ ಸಂಸ್ಥಾಪನಾ ದಿನದ ಅಂಗವಾಗಿ ಪಕ್ಷದ ಕಾರ್ಯಕರ್ತರಿಗೆ ಸಂದೇಶ ನೀಡಿದ ಅವರು ದೇಶ ಸಂಕಷ್ಟದಲ್ಲಿದ್ದು, ಕಾರ್ಯಕರ್ತರು ಒಂದು ಹೊತ್ತಿನ ಊಟ ಬಿಡಲು ಕರೆ ನೀಡಿದ್ದಾರೆ. ಕಾರ್ಯಕರ್ತರು ತಲಾ 100 ರೂ. ಪಿಎಂ ಕೇರ್ಸ್ ಫಂಡ್ ಗೆ ನೀಡಬೇಕು. ಜೊತೆಗೆ ಜನರಿಗೆ ನೆರವಾಗಬೇಕೆಂದು ತಿಳಿಸಿದ್ದು, ನಡ್ಡಾ ಸಲಹೆ ಪಾಲಿಸುವಂತೆ ಪ್ರಧಾನಿ ಮೋದಿ ಕೂಡ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.