Wednesday, June 3, 2026
Homeತಾಜಾ ಸುದ್ದಿರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಮತ್ತು ಮಾಜಿ ಎಂಎಲ್ಸಿ...

ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಮತ್ತು ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ನೇಮಕ ಮಾಡಲಾಗಿದೆ.

ಖಾಲಿ ಇರುವ ಸ್ಥಾನಗಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮಾಜಿ ಶಾಸಕಿ ವಿನೀಶಾ ನೀರೋ ಮತ್ತು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಡೇವಿಡ್ ಸೀಮೆಯೋನ್ ಇನ್ನಿಬ್ಬರು ಸದಸ್ಯರಾಗಿದ್ದಾರೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದು, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ರಾಜ್ಯದಲ್ಲಿನ ಕ್ರಿಶ್ಚಿಯನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯ ಭವನಗಳ ನಿರ್ಮಾಣ, ಚರ್ಚ್ ದುರಸ್ಥಿ ಮತ್ತು ನವೀಕರಣ ಮುಂತಾದ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳಿಸಲು ಸಮಿತಿಯನ್ನು ರಚಿಸಲಾಗಿದೆ.

- Advertisement -

Latest News

error: Content is protected !!