Thursday, July 16, 2026
HomeUncategorizedಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ, ತೆನೆ ಹೊತ್ತ ಮಹಿಳೆಯ ಕೈ ಹಿಡಿದ ನ್ಯಾಯಾಧೀಶ

ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ, ತೆನೆ ಹೊತ್ತ ಮಹಿಳೆಯ ಕೈ ಹಿಡಿದ ನ್ಯಾಯಾಧೀಶ

- Advertisement -
- Advertisement -

ಗದಗ : ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ನ್ಯಾಯಾಧೀಶರೊಬ್ಬರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಅಚ್ಚರಿಯ ಘಟನೆ ಗದಗದಲ್ಲಿ ನಡೆದಿದೆ.

ಸುಭಾಷ್ ಚಂದ್ರ ರಾಠೋಡ ಅವರು ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಕಲಬುರಗಿ, ಚಿತ್ತಾಪುರ ಮತ್ತು ಗದಗ ಜೆಎಂಎಫ್ಸಿ ಕೋರ್ಟ್ನ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಭಾಷ್ಚಂದ್ರ ರಾಠೋಡ ಅವರು ಸದ್ಯ ರಾಜಕೀಯಕ್ಕೆ ಆಗಮಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಜ.18ರಂದು ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿದ ಇವರು ಫೆ.4ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಸದ್ಯ, ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕಿಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ

- Advertisement -

Latest News

error: Content is protected !!