Sunday, May 5, 2024
Homeಅಪರಾಧಜಾರ್ಖಂಡ್ ನಲ್ಲಿ ನ್ಯಾಯಾಧೀಶರ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!!

ಜಾರ್ಖಂಡ್ ನಲ್ಲಿ ನ್ಯಾಯಾಧೀಶರ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!!

spot_img
- Advertisement -
- Advertisement -

ಜಾರ್ಖಂಡ್: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಕೊಂದು ಪರಾರಿಯಾದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಧನಬಾದ್‌ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಉತ್ತಮ್‌ ಆನಂದ್‌ ಅವರು ಬುಧವಾರ ಬೆಳಿಗ್ಗೆ 5 ಗಂಟೆಗೆ ಜಿಲ್ಲಾ ನ್ಯಾಯಾಲಯದ ಬಳಿ ವಾಯುವಿಹಾರಕ್ಕೆ ತೆರಳಿದ್ದಾಗ ಹಿಂದಿನಿಂದ ಬರುತ್ತಿದ್ದ ಆಟೋ ಆನಂದ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ಘಟನೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಅಪಘಾತವಲ್ಲ, ಪೂರ್ವನಿಯೋಜಿತ ಕೃತ್ಯ ಎಂಬುವುದು ಸಾಬೀತಾಗಿದೆ. ಸದ್ಯ ತನಿಖೆ ಆರಂಭಿಸಿರುವ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಆಟೊ ರಿಕ್ಷಾ ಚಾಲಕರೊಬ್ಬರು ಗಂಭೀರ ಪರಿಸ್ಥಿತಿಯಲ್ಲಿದ್ದ ನ್ಯಾಯಾಧೀಶರನ್ನು ತಕ್ಷಣವೇ ಸಮೀಪದ ಶಹೀದ್‌ ನಿರ್ಮಲ್‌ ಮಹ್ತೊ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾದರು,ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ನ್ಯಾಯಾಧೀಶರಿಗೆ ಡಿಕ್ಕಿ ಹೊಡೆದು ಕೊಲೆಗೈದ ಆಟೋ ಕದ್ದ ಆಟೋ ಎಂದು ತನಿಖೆಯಿಂದ ತಿಳಿದುಬಂದಿದ್ದು, ಈ ಆಟೋವನ್ನು ಪಥಾರ್ದಿಹ್ ನಿವಾಸಿ ಸುಗ್ನಿ ದೇವಿ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಪೊಲೀಸರು ಆತನೊಂದಿಗೆ ಮಾತನಾಡಿದಾಗ, ಒಂದು ದಿನದ ಹಿಂದೆ ಆತನ ಆಟೋ ಕಳವಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲ ದರೋಡೆಕೋರರು ಮತ್ತು ದುಷ್ಕರ್ಮಿಗಳನ್ನು ಪೊಲೀಸರು ಕಟ್ಟುನಿಟ್ಟಾಗಿ ವಿಚಾರಣೆ ನಡೆಸುತ್ತಿದ್ದಾರೆ

ಸದ್ಯ ಈ ವಿಚಾರ ಸುಪ್ರೀಂ ಕೋರ್ಟ್‌ ತಲುಪಿದ್ದು, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕಾಸ್ ಸಿಂಗ್, ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ತನಿಖೆ ನಡೆಸಬೇಕೆಂದು ಹೈಕೋರ್ಟ್‌ಗೆ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧ್ಯಕ್ಷ ಮತ್ತು ಹಿರಿಯ ವಕೀಲ ವಿಕಾಸ್‌ ಸಿಂಗ್‌ ಅವರು ನ್ಯಾಯಾಧೀಶರ ಹತ್ಯೆ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠದ ಗಮನಕ್ಕೆ ತಂದರು.

‘ನ್ಯಾಯಾಂಗ ಸ್ವಾತಂತ್ರ್ಯದ ಮೇಲೆ ನಡೆಸಿದ ದಾಳಿ ಇದಾಗಿದೆ. ಗ್ಯಾಂಗ್‌ಸ್ಟರ್‌ಗೆ ಜಾಮೀನು ನೀಡದ ಕಾರಣ ಹತ್ಯೆ ಮಾಡಿದರೆ ಈ ದೇಶದಲ್ಲಿ ನ್ಯಾಯಾಂಗವೇ ಇಲ್ಲದಂತಾಗುತ್ತದೆ. ಹತ್ಯೆ ಮಾಡಿದ ದೃಶ್ಯಗಳ ವಿಡಿಯೊ ಸಹ ಮಾಡಿಕೊಳ್ಳಲಾಗಿದೆ. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಿದರು

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು,ವಕೀಲರ ಸಂಘದ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇವೆ. ಜಾರ್ಖಂಡ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜತೆ ನಾನು ಮಾತನಾಡಿದ್ದೇನೆ. ಈ ಪ್ರಕರಣದ ವಿಚಾರಣೆ ಅಲ್ಲಿ ನಡೆಯುತ್ತಿದೆ ಎಂದು ಹೇಳಿದರು.

‘ಹತ್ಯೆ ಪ್ರಕರಣವನ್ನು ಹೈಕೋರ್ಟ್‌ ಈಗಾಗಲೇ ಪರಿಶೀಲಿಸುತ್ತಿರುವುದರಿಂದ ಈ ಹಂತದಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡುವುದು ಅಗತ್ಯವಿಲ್ಲ’ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!