- Advertisement -
- Advertisement -
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಹನ್ನೊಂದು ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾಗಿದ್ದರು.ಪ್ರಕರಣ ಸಂಬಂಧ ರಚಿಸಲ್ಪಟ್ಟಿದ್ದ ಜಸ್ಟೀಸ್ ಜಾನ್ ಮೈಕೆಲ್ ಡಿಕುನ್ಹಾ ವಿಚಾರಣಾ ಆಯೋಗದ ವರದಿ ಇಂದು ಸಂಜೆ ಆರು ಗಂಟೆಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆಯಾಗಲಿದೆ
ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿತ್ತು. ಬಳಿಕ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್, ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿತ್ತು.
- Advertisement -