Tuesday, July 1, 2025
Homeಕರಾವಳಿಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಪುತ್ತೂರು: ಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರನ್ನು ನವೆಂಬರ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಆದ್ರೆ ನ್ಯಾಯಾಧೀಶರ ಆದೇಶ ಮೇರೆಗೆ ಬುಧವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನವೆಂಬರ 22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಈ ಬಗ್ಗೆ ಪುತ್ತೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!