- Advertisement -
- Advertisement -
ಪುತ್ತೂರು; ಸಹಪಾಠಿಯಿಂದಲೇ ವಿದ್ಯಾರ್ಥಿನಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 10 ದಿನಗಳಿಂದ ಆರೋಪಿ ಕೃಷ್ಣ ಜೆ ರಾವ್ ತಲೆ ಮರೆಸಿಕೊಂಡಿದ್ದ. ನಿನ್ನೆ(ಜುಲೈ 4ರಂದು) ಆತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದರು.
ಇಂದು ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಬಳಿಕ ಆತನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು ಆ ವೇಳೆ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
- Advertisement -