Saturday, June 6, 2026
Homeಕರಾವಳಿಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಮತ್ತು ಸಹಾಯಕ ಸಿಕ್ಕಿಬಿದ್ದ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಮಂಗಳೂರು...

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಮತ್ತು ಸಹಾಯಕ ಸಿಕ್ಕಿಬಿದ್ದ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಮಂಗಳೂರು ಕೋರ್ಟ್

- Advertisement -
- Advertisement -

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ  ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಸಹಾಯಕನಿಗೆ  ಮಂಗಳೂರು ಕೋರ್ಟ್ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಮಂಗಳೂರು ಮಿನಿ ವಿಧಾನ ಸೌಧದ ತಾಲೂಕು ಕಚೇರಿಗೆ ದಾಳಿ ನಡೆಸಿದಾಗ ಲೋಕಾಯುಕ್ತ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಸಹಾಯಕ ಶಿವಾನಂದ ನಾಟೇಕರ್ ಎಂಬಾತನನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದರು.

ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಯ ವೇಳೆ ಲಂಚದ ಹಣವನ್ನು ತಹಶೀಲ್ದಾರ್ ಪರವಾಗಿ ತಾನು ಪಡೆದಿದ್ದು ಎಂದು ಶಿವಾನಂದ ತಿಳಿಸಿದ್ದ ಕಾರಣ ಅವರನ್ನು ಕೂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

- Advertisement -

Latest News

error: Content is protected !!