Tuesday, May 21, 2024
Homeತಾಜಾ ಸುದ್ದಿಏ.11 ರವರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ

ಏ.11 ರವರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಂತ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ, ಇಂದು ನ್ಯಾಯಾಲಯವು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿದ್ದರು.ಅವರ ಈ ಪ್ರಕರಣದಲ್ಲಿ ನಿರೀಕ್ಷಾಣಾ ಜಾಮೀನು ಪಡೆದು ಕೆಲ ಕಾಲ ಹೊರಗಿದ್ದರು.

ಈ ಬಳಿಕ ನಿರೀಕ್ಷಾಣಾ ಜಾಮೀನು ಅವಧಿ ಮುಕ್ತಾಯಗೊಂಡ ನಂತ್ರ ಹೈಕೋರ್ಟ್ ನಿರೀಕ್ಷಾಣಾ ಜಾಮೀನು ರದ್ದುಗೊಳಿಸಿತ್ತು. ಈ ಬಳಿಕ ಲೋಕಾಯುಕ್ತ ಪೊಲೀಸರಿಂದ ಅವರನ್ನು ಚೆನ್ನಗಿರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತ ವೇಳೆ ಮಾರ್ಗಮಧ್ಯೆ ಬಂಧಿಸಲಾಗಿತ್ತು.ಕೋರ್ಟ್ ಗೆ ಹಾಜರು ಪಡಿಸಿ, ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಕೇಳಿಕೊಂಡಿದ್ದರು. ಈ ಮನವಿಗೆ ಪುರಸ್ಕರಿಸಿದ್ದಂತ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಹೆಚ್ಚಿನ ವಿಚಾರಣೆಗಾಗಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನೀಡಿತ್ತು.

ಇಂದು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿತ್ತು.ಈ ಬಗ್ಗೆ ಇಂದು ವಿಚಾರಣೆ ನಡೆಸಿದಂತ ನ್ಯಾಯಪೀಠವು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಜೈಲೇ ಗತಿ ಎನ್ನುವಂತೆ ಆಗಿದೆ.

- Advertisement -
spot_img

Latest News

error: Content is protected !!