Tuesday, May 21, 2024
Homeತಾಜಾ ಸುದ್ದಿಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ: ಇ-ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ: ಇ-ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನ

spot_img
- Advertisement -
- Advertisement -

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇ-ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ 6000 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ 6000 ರೂಪಾಯಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ರೈತರು ಜುಲೈ 31 ರೊಳಗೆ ಮೊಬೈಲ್ ಓಟಿಪಿ ಆಧಾರಿತ ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸಬಹುದಾಗಿದೆ.

ಕರ್ನಾಟಕ ರಾಜ್ಯದಲ್ಲಿ ಈವರೆಗೆ ಶೇಕಡಾ 16 ರಷ್ಟು ರೈತರು ಮಾತ್ರ ಇ-ಕೆವೈಸಿ ಮಾಡಿಸಿದ್ದು, ಶೇಕಡಾ 84 ರಷ್ಟು ರೈತರು ಬಾಕಿ ಇದ್ದಾರೆ.

- Advertisement -
spot_img

Latest News

error: Content is protected !!