- Advertisement -
- Advertisement -
ಕಾಂತಾರ-2 ಭಾಗದ ಸಿನಿಮಾದಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ.
ಕಾಂತಾರ-2 ಸಿನಿಮಾದ ಶೂಟಿಂಗ್ ಕೊಲ್ಲೂರು ಭಾಗದಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಪಿಲ್ ಮತ್ತು ತಂಡ ಶೂಟಿಂಗ್ ಮುಗಿಸಿ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದ್ದು, ಕಪಿಲ್ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ ಎನ್ನಲಾಗಿದೆ.
ಇನ್ನು ಈ ಮೊದಲೇ ದೈವ ನುಡಿದಂತೆ ಕಾಂತಾರ ಚಿತ್ರೀಕರಣಕ್ಕೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದ್ದು, ಒಂದಲ್ಲ ಒಂದು ಗಂಡಾಂತರ ಎದುರಾಗುತ್ತಲಿದೆ. ಇನ್ನು ಈ ಮೊದಲು ಕೊಲ್ಲೂರಿನಲ್ಲೇ ಜೂನಿಯರ್ ಆರ್ಟಿಸ್ಟ್ ಗಳಿದ್ದ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ನಂತರದಲ್ಲಿ ಗಾಳಿ ಮಳೆಗೆ ಬೃಹತ್ ಸೆಟ್ ಹಾರಿ ಹೋದ ಘಟನೆಯು ನಡೆದಿತ್ತು.
- Advertisement -