- Advertisement -
- Advertisement -
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಟಾಲಿವುಡ್ ನಟ ಜೂನಿಯರ್ ಎನ್ ಟಿಆರ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಸ್ಯಾಂಡಲ್ ವುಡ್ ನಟ ರಿಷಭ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಜೂನಿಯರ್ ಎನ್ ಟಿಆರ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಜೂನಿಯರ್ ಎನ್ ಟಿಆರ್ ತಾಯಿ ಶಾಲಿನಿ ನಂದಮೂರಿ, ಪತ್ನಿ ಲಕ್ಷ್ಮಿ ಪ್ರಣತಿ, ರಿಷಭ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ, ಪ್ರಶಾಂತ್ ನೀಲ್ ಪತ್ನಿ ಲಿಖಿತಾ ನೀಲ್ ಕೂಡಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.
ಇದೇ ವೇಳೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯಿಂದ ಚಲನಚಿತ್ರ ನಟರಿಗೆ ಗೌರವ ಸಮರ್ಪಿಸಲಾಯಿತು.
ನಿನ್ನೆ ಜೂನಿಯರ್ ಎನ್ ಟಿಆರ್, ರಿಷಭ್ ಶೆಟ್ಟಿ ಮತ್ತು ಪ್ರಶಾಂತ್ ನೀಲ್ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.
- Advertisement -