Wednesday, May 1, 2024
Homeಕರಾವಳಿಮೂಡಬಿದರೆ ಮೂಲದ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ಗವರ್ನರ್...

ಮೂಡಬಿದರೆ ಮೂಲದ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ಗವರ್ನರ್ ಆಗಿ ನೇಮಕ

spot_img
- Advertisement -
- Advertisement -

ನವದೆಹಲಿ; ಮೂಡಬಿದರೆ ಮೂಲದ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ಗವರ್ನರ್ ಆಗಿ ನೇಮಕವಾಗಿದ್ದಾರೆ. ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.ನೇಮಕಾತಿಗೆ ರಾಷ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.


ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರಾಗಿದ್ದು, ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದ ಎಸ್.ಅಬ್ದುಲ್ ನಜೀರ್ ಅವರು ಜನವರಿ 14ರಂದು ನಿವೃತ್ತರಾಗಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯ ಸಂಕೀರ್ಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಜಸ್ಟಿಸ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದರು. ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ ಅವರು 2003ರ ಮೇ 12 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

- Advertisement -
spot_img

Latest News

error: Content is protected !!