Thursday, November 26, 2026
Homeಕರಾವಳಿಸೌಜನ್ಯಾ ಪ್ರಕರಣದಲ್ಲಿ ಸಿಎಂ ಮಧ್ಯಸ್ಥಿಕೆಯಿಂದಲೇ ನ್ಯಾಯ ಸಿಗಬೇಕು; ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯಾ ಪ್ರಕರಣದಲ್ಲಿ ಸಿಎಂ ಮಧ್ಯಸ್ಥಿಕೆಯಿಂದಲೇ ನ್ಯಾಯ ಸಿಗಬೇಕು; ಮಹೇಶ್ ಶೆಟ್ಟಿ ತಿಮರೋಡಿ

- Advertisement -
- Advertisement -

ಮಂಗಳೂರು: ಸೌಜನ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿ ಉತ್ತಮ ರೀತಿಯಲ್ಲಿ ನಡೆಸುತ್ತಿದೆ. ಆದರೆ, 90 ದಿನಗಳೊಳಗೆ ತನಿಖೆ ಪೂರ್ಣಗೊಳಿಸಬೇಕೆಂಬ ಒತ್ತಾಯ ನಮ್ಮದಲ್ಲ. ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದು ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದ್ದಾರೆ.

ಗುರುವಾರ ಮಂಗಳೂರಿನ ಎಸ್‌ಐಟಿ ಕಚೇರಿಗೆ ಹಾಜರಾದ ಅವರು, ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿದ್ದ ದಾಖಲೆಗಳನ್ನು ಟೈಪ್ ಮಾಡಿದ ಪ್ರತಿ, ಕೈಬರಹ ಹಾಗೂ ಸಿಡಿ ರೂಪದಲ್ಲಿ ಒದಗಿಸಿರುವುದಾಗಿ ತಿಳಿಸಿದರು. ಎಸ್‌ಐಟಿ ಅಧಿಕಾರಿಗಳು ಹೆಚ್ಚುವರಿ ಮಾಹಿತಿ ಕೇಳಿದ್ದು, ಅದನ್ನು ನೀಡಲು ಸಿದ್ಧವಿರುವುದಾಗಿ ಹೇಳಿದರು.

ಪ್ರಕರಣ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ಹಳೆಯ ಪ್ರಕರಣದ ತನಿಖೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಪ್ರಯತ್ನಿಸುತ್ತಿದ್ದರೂ, ಪ್ರಕರಣದ ಆಳವಾದ ಪರಿಶೀಲನೆಗೆ ಹೆಚ್ಚಿನ ಸಮಯ ಬೇಕಾಗಬಹುದು ಎಂದರು.

ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯನ್ನು ಉಲ್ಲೇಖಿಸಿದ ತಿಮರೋಡಿ, ನಮಗೆ ಎಸ್‌ಐಟಿಗಿಂತ ರಾಜ್ಯದ ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

- Advertisement -

Latest News

error: Content is protected !!