Wednesday, June 24, 2026
Homeತಾಜಾ ಸುದ್ದಿಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸೂರ್ಯಕಾಂತ್ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸೂರ್ಯಕಾಂತ್ ಹೆಸರು ಶಿಫಾರಸು

- Advertisement -
- Advertisement -

ನವದೆಹಲಿ: ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸೂರ್ಯಕಾಂತ್ ಅವರು ನೇಮಕವಾಗುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಯಾಗಿರುವ ಸೂರ್ಯಕಾಂತ್ ಅವರ ಹೆಸರನ್ನು ಸಿಜೆಐ ಬಿ.ಆರ್. ಗವಾಯಿ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ.

ಮೇ 14 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದ ಜಸ್ಟೀಸ್ ಗವಾಯಿ ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ. ನವೆಂಬರ್ 24 ರಂದು ಜಸ್ಟೀಸ್ ಸೂರ್ಯಕಾಂತ್ ಸುಪ್ರೀಂ ಕೋರ್ಟ್ ನ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದ್ದು, 2027ರ ಫೆಬ್ರವರಿ 9 ರಂದು ನಿವೃತ್ತರಾಗಲಿದ್ದಾರೆ.

- Advertisement -

Latest News

error: Content is protected !!