Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಜುವೆಲ್ಲರಿ ಶಾಪ್ ಸಿಬ್ಬಂದಿ ಕೊಲೆ ಪ್ರಕರಣ; ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರಿನಲ್ಲಿ ಜುವೆಲ್ಲರಿ ಶಾಪ್ ಸಿಬ್ಬಂದಿ ಕೊಲೆ ಪ್ರಕರಣ; ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರಿನ ಮಿಲಾಗ್ರಿಸ್ ಬಳಿಯ ಮಂಗಳೂರು ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿ ರಾಘವೇಂದ್ರ ಆಚಾರ್ಯ ಎಂಬವರನ್ನು ಕೊಲೆಗೈದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.  ಕಾಸರಗೋಡಿನಲ್ಲಿ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ.

ಆರೋಪಿಯನ್ನು ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ. ಸದ್ಯ ಆರೋಪಿ ಶಿಫಾಸ್ ನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸುವ ಪ್ರಕ್ರಿಯೆ ನಡೆದಿದೆ.ದರೋಡೆ ನಡೆಸುವ ಉದ್ದೇಶದಿಂದಲೇ ಆರೋಪಿ ಕೊಲೆ ನಡೆಸಿದ್ದಾನೆ ಎನ್ನಲಾಗಿದೆ. ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಕೊಲೆ ನಡೆದಿತ್ತು. ಬರೋಬ್ಬರಿ ಒಂದು ತಿಂಗಳ ಬಳಿಕ ಇದೀಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ.

- Advertisement -

Latest News

error: Content is protected !!