Sunday, May 19, 2024
Homeತಾಜಾ ಸುದ್ದಿಕ್ಯಾ.ಅಮರೀಂದರ್ ಸಿಂಗ್ ಶೀಘ್ರವೇ ಬಿಜೆಪಿ ಸೇರ್ಪಡೆ: ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗುವ ಸಾಧ್ಯತೆ 

ಕ್ಯಾ.ಅಮರೀಂದರ್ ಸಿಂಗ್ ಶೀಘ್ರವೇ ಬಿಜೆಪಿ ಸೇರ್ಪಡೆ: ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗುವ ಸಾಧ್ಯತೆ 

spot_img
- Advertisement -
- Advertisement -

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜುಲೈ ತಿಂಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹರಿದಾಡುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿವೆ.

ಅಮರೀಂದರ್ ಸಿಂಗ್ ಅವರು ಲಂಡನ್ ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕೇಸರಿ ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ಕೆಲವು ವಾರಗಳ ನಂತರ ಕ್ಯಾಪ್ಟನ್ ಸಿಂಗ್ ಲಂಡನ್ ನಿಂದ ಪಂಜಾಬ್ ಗೆ ವಾಪಸ್ ಆದ ನಂತರ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಂದು ವೇಳೆ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಿದಲ್ಲಿ, ಸಿಂಗ್ ಪತ್ನಿ ಪ್ರಣೀತ್ ಕೌರ್ ನೇತೃತ್ವದಲ್ಲಿ ಪಕ್ಷದ ವಿಲೀನ ಪ್ರಕ್ರಿಯೆ ನಡೆಯಲಿದೆ. ಪಟಿಯಾಲಾ ಸಂಸದರಾಗಿರುವ ಕೌರ್ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಕುರಿತು ಜುಲೈ 5ರಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ. ಜುಲೈ 19 ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 20ರಂದು ನಾಮಪತ್ರ ಪರಿಶೀಲನೆ, ಜುಲೈ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ ಎರಡನೇ ವಾರದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಎನ್ ಡಿಎ ಮೈತ್ರಿಕೂಟ ಘೋಷಿಸಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.

- Advertisement -
spot_img

Latest News

error: Content is protected !!