ಬೆಳ್ತಂಗಡಿ : ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಧರ್ಮಸ್ಥಳ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪವರ್ ಮಿನಿಸ್ಟರ್ ಕೆ.ಜೆ.ಜಾರ್ಜ್ ಅವರನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ ಮತ್ತು ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರು ಹೂಹಾರ ಹಾಕಿ ಸ್ವಾಗತಿಸಿದರು.
ನಂತರ ನೇರ ಕಾರಿನ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರು ಭೇಟಿ ಮಾಡಿ ಕೆಲ ಹೊತ್ತು ಸರಕಾರದ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿ ಬಳಿಕ ನೇರ ಬೆಳ್ತಂಗಡಿ ಖಾಸಗಿ ಕಾರ್ಯಕ್ರಮಕ್ಕೆ ಕಾರಿನ ಮೂಲಕ ತೆರಳಿದರು.
ಕೆ.ಜೆ.ಜಾರ್ಜ್ ಧರ್ಮಸ್ಥಳ ಭೇಟಿ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ನ , ಜೆ.ಆರ್.ಲೋಬೋ, ಎಮ್.ಎಲ್.ಸಿ ಹರೀಶ್ ಕುಮಾರ್, ರಂಜನ್ ಗೌಡ, ಗಂಗಾಧರ ಗೌಡ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.