Friday, June 26, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ : ಭಾರತ ತಂಡದ ಕ್ರಿಕೆಟ್ ಆಟಗಾರ, ತಂಡದ ಉಪನಾಯಕ ಕೆ.ಎಲ್. ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ  ದೇಗುಲದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಬರಮಾಡಿಕೊಳ್ಳಲಾಯಿತು.

 ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕೆ.ಎಲ್. ರಾಹುಲ್ ಅವರನ್ನು ಗೌರವಿಸಿದರು.

- Advertisement -

Latest News

error: Content is protected !!