Wednesday, June 24, 2026
Homeತಾಜಾ ಸುದ್ದಿ“ಕಮಲ” ಬಿಟ್ಟು “ಹಸ್ತ” ಹಿಡಿದ ಮಾಜಿ ವಿಧಾನಪರಿಷತ್ ಸದಸ್ಯ ಕೆ ಪಿ ನಂಜುಂಡಿ

“ಕಮಲ” ಬಿಟ್ಟು “ಹಸ್ತ” ಹಿಡಿದ ಮಾಜಿ ವಿಧಾನಪರಿಷತ್ ಸದಸ್ಯ ಕೆ ಪಿ ನಂಜುಂಡಿ

- Advertisement -
- Advertisement -

ಬೆಂಗಳೂರು: ಮಾಜಿ ವಿಧಾನಪರಿಷತ್ ಸದಸ್ಯ ಕೆ ಪಿ ನಂಜುಂಡಿ ಲೋಕಸಭಾ ಚುನಾವಣೆ ಹೊತ್ತಿನಲ್ಲಿಯೇ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಕೆ ಪಿ ನಂಜುಂಡಿ ಅವರು ಬಿಜೆಪಿ ಮತ್ತು ವಿಧಾನ ಪರಿಷತ್ ಸ್ಥಾನ ತೊರೆದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ್ಯ ಉಪಸ್ಥಿತರಿದ್ದರು.

- Advertisement -

Latest News

error: Content is protected !!