Thursday, June 4, 2026
Homeಕರಾವಳಿಮಂಗಳೂರು; ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್  ಹಾಕಿದ ಪ್ರಕರಣ; ಆರೋಪಿ...

ಮಂಗಳೂರು; ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್  ಹಾಕಿದ ಪ್ರಕರಣ; ಆರೋಪಿ ಕೆ.ಆರ್. ಶೆಟ್ಟಿಗೆ  ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಮಂಗಳೂರು: ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್  ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆ.ಆರ್. ಶೆಟ್ಟಿಗೆ  ಕೋರ್ಟ್ ಜಾಮೀನು ನಿರಾಕರಿಸಿದೆ.

ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ಆರೋಪಿಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ. ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!