Tuesday, May 7, 2024
Homeತಾಜಾ ಸುದ್ದಿಮುಂದೂಡಿಕೆಯಾಗಿದ್ದ ಕೆ-ಸೆಟ್ ಪರೀಕ್ಷೆಗೆ ದಿನಾಂಕ ನಿಗದಿ

ಮುಂದೂಡಿಕೆಯಾಗಿದ್ದ ಕೆ-ಸೆಟ್ ಪರೀಕ್ಷೆಗೆ ದಿನಾಂಕ ನಿಗದಿ

spot_img
- Advertisement -
- Advertisement -

ಮೈಸೂರು: ಮುಂದೂಡಲ್ಪಟ್ಟಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್) ಏಪ್ರಿಲ್ 25 ರಂದು ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯ ಏಪ್ರಿಲ್ 11 ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಕಾರಣಾಂತರದಿಂದ ಪರೀಕ್ಷೆ ಮುಂದೂಡಲಾಗಿತ್ತು. ಏಪ್ರಿಲ್ 25 ರಂದು ಕೆ -ಸೆಟ್ ಪರೀಕ್ಷೆ ನಡೆಯಲಿದೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು, ಸಾರಿಗೆ ಅಧಿಕಾರಿಗಳು ಪರೀಕ್ಷೆ ಸೂತ್ರವಾಗಿ ನಡೆಸಲು ಸಹಕಾರ ನೀಡಬೇಕೆಂದು ಕೆ -ಸೆಟ್ ಸಂಯೋಜನಾಧಿಕಾರಿ ಪ್ರೊ. ರಾಜಶೇಖರ್ ಮನವಿ ಮಾಡಿದ್ದಾರೆ.

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿರುವ ನೋಡಲ್‌ ಕೇಂದ್ರಗಳಲ್ಲಿ 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ.

ಮಾಹಿತಿಗೆ https://kset.uni-mysore.ac.in

- Advertisement -
spot_img

Latest News

error: Content is protected !!