Sunday, May 5, 2024
Homeತಾಜಾ ಸುದ್ದಿಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ವಿಧಿವಶ

ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 ಬೆಂಗಳೂರಿನ ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿ ಕೆ ಶಿವರಾಂ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕೆ ಶಿವರಾಂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದರು. ಮೊನ್ನೆ  ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು.

- Advertisement -
spot_img

Latest News

error: Content is protected !!