Tuesday, April 30, 2024
Homeತಾಜಾ ಸುದ್ದಿಕಡಬದಲ್ಲಿ ಅಕ್ರಮ ಗೋಸಾಗಾಟ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕಡಬದಲ್ಲಿ ಅಕ್ರಮ ಗೋಸಾಗಾಟ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಕಡಬದಲ್ಲಿ ಅಕ್ರಮ ಗೋಸಾಗಾಟ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿ ಏ.1 ರಂದು ಕಡಬ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ವೇಳೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಕಾರು‌ ಚಲಾಯಿಸುತ್ತಿದ್ದ ಕಡಬ ಸಮೀಪದ ಕಳಾರ ನಿವಾಸಿ ಮಹಮ್ಮದ್ ಸಾಹಿದ್ ಮತ್ತು ಸುಂಕದಕಟ್ಟೆ ಸಮೀಪದ ಮೂಜೂರು ನಿವಾಸಿ ಅಬ್ದುಲ್ ಸಲಾಮ್ ಬಂಧಿತ ಆರೋಪಿಗಳು.

ಕಡಬ ಠಾಣೆಯಲ್ಲಿ ಉಬರಡ್ಕ ಮಿತ್ತೂರು ಸುಧಾಕರ್ ರೈ ಎಂಬವರು ತನ್ನ ಮಾವ ವಿಠಲ ರೈ ಎಂಬವರು ಮರ್ಧಾಳ ಪೇಟೆಯ ಮಾರ್ಗದ ಬದಿಯಲ್ಲಿ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವುದಾಗಿ ದೂರು ದಾಖಲಿಸಿದ್ದರು. ಅದರಂತೆ ಘಟನೆಗೆ ಸಂಬಂಧಿಸಿ  ಪ್ರಮುಖ ಕಾರಣರಾದ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಉಳಿದವರನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ಆರೋಪಿಗಳ ವಿರುದ್ದ ಅ.ಕ್ರ: 45/2024 ಕಲಂ : 302 ಜೊತೆಗೆ 34 ಐ ಪಿ ಸಿ ಮತ್ತು ಕಲಂ:4,5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?

ದನ ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಮರ್ದಾಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ವಿಚಾರ ಪ್ರತಿಭಟನೆಯ ಸ್ವರೂಪ ಪಡೆದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಜ್ಯ ರಸ್ತೆ ತಡೆದು ಪ್ರತಿಭಟನೆ ಮಾಡಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ತಡ ರಾತ್ರಿ ಎಸ್.ಪಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಜೊತೆ ಮಾತನಾಡಿದ್ದರು. ಅಲ್ಲದೆ  ತ್ವರಿತವಾಗಿ ಆರೋಪಿಗಳನ್ನು ಬಂಧಿಸುವ ಎಲ್ಲಾ ಪ್ರಕ್ರಿಯೆ ಗಳನ್ನು ಮಾಡುವ ಭರವಸೆ ನೀಡಿದ್ದರು. ಅದರಂತೆ ಮುಂಜಾನೆಯೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪೊಲೀಸರ ಈ ತ್ವರಿತ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!