Wednesday, June 3, 2026
Homeಕರಾವಳಿಕಡಬ; ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಪ್ರಕರಣ; ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ...

ಕಡಬ; ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಪ್ರಕರಣ; ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಕಡಬ ಪೊಲೀಸರು

- Advertisement -
- Advertisement -

ಕಡಬ; ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆರೋಪಿಯು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದರು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು‌.

ಇನ್ನು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಇಂದು ಮಧ್ಯಾಹ್ನದ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಡೆಡ್ ಲೈನ್ ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!