Monday, June 29, 2026
Homeಕರಾವಳಿಕಡಬ: ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ...

ಕಡಬ: ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯು ಟಿ ಖಾದರ್ ಆಗ್ರಹ

- Advertisement -
- Advertisement -

ಕಡಬ : ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು, ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ, ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ.ಖಾದರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಜಿಲ್ಲೆಯಲ್ಲಿ ಮತ್ತೆ ಇಂಥಹ ಘಟನೆಗಳು ಮರುಕಳಿಸಬಹುದು. ಆದುದರಿಂದ ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!