Sunday, June 7, 2026
Homeಕರಾವಳಿಕಡಬದ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು

ಕಡಬದ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು

- Advertisement -
- Advertisement -

ಕಡಬದ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವನ್ನಪ್ಪಿದೆ. ಈ ಕಾಡಾನೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ.

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು.  ಆದರೆ ಆ.11ರ ಶುಕ್ರವಾರ ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಅದರ ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಗಿದೆ.

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂಬೆಳಗ್ಗೆ  ಕಾಡಾನೆ ದಾಳಿಗೆ ರಂಜಿತಾ (24) ಹಾಗೂ ರಮೇಶ್ ರೈ (58) ಬಲಿಯಾಗಿದ್ದರು.

ಘಟನೆಯಿಂದ ಆಕ್ರೋಶಗೊಂಡಿದ್ದ ಸಾರ್ವಜನಿಕರು ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಬಳಿಕ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ನಂತರ ಮತ್ತಿಗೋಡು ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿತ್ತು.

- Advertisement -

Latest News

error: Content is protected !!