ಕಡಬ : ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲಂಕಾರು ಕಜೆಯ ಬಾಡಿಗೆ ಮನೆಯೊಂದರಲ್ಲಿ ಜೂನ್ 20 ರಂದು ನಡೆದಿದೆ. ಅಪ್ಪನ ದುಡುಕಿನ ನಿರ್ಧಾರದಿಂದಾಗಿ 2 ವರ್ಷದ ಪುಟ್ಟ ಕಂದಮ್ಮ ಅನಾಥವಾಗಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ಮೃತರು.
ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಈ ದಂಪತಿ ಎರಡು ವರ್ಷದ ಹೆಣ್ಣು ಮಗು ಧ್ರುವಿಯೊಂದಿಗೆ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಇವರು, ಜೂ.19ರ ಸಂಜೆ ಪುನಃ ಬಂದಿದ್ದರು. ಜೂ.20ರಂದು ಘಟನೆ ನಡೆದಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಹೆಣ್ಣು ಮಗು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


