Thursday, June 4, 2026
Homeಕರಾವಳಿಕಡಬದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ ಘೋಷಣೆ ಕೂಗಿದ ಪ್ರಕರಣ; ಓರ್ವ ಆರೋಪಿಯ ಬಂಧನ

ಕಡಬದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ ಘೋಷಣೆ ಕೂಗಿದ ಪ್ರಕರಣ; ಓರ್ವ ಆರೋಪಿಯ ಬಂಧನ

- Advertisement -
- Advertisement -

ಕಡಬದ ಮರ್ದಾಳದಲ್ಲಿ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಬಂಧಿತ ಆರೋಪಿ. ಇನ್ನೋರ್ವ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದಾನೆ.
ಭಾನುವಾರ ರಾತ್ರಿ 11 ಗಂಟೆ ಆರೋಪಿಗಳು ಬೈಕ್ ನಲ್ಲಿ ಬಂದು ಮರ್ದಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು.ಈ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ಕ್ಯಾಮೆರಾದಲ್ಲಿ ಇಬ್ಬರು ಕಿಡಿಗೇಡಿಗಳು ಒಳನುಗ್ಗಿ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು.

ಬೈಕ್ ನಲ್ಲಿದ್ದವರು ಮಸೀದಿಯ ಧರ್ಮಗುರುಗಳನ್ನ ನೋಡಿ ತಕ್ಷಣ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗದ 24 ಗಂಟೆಯೊಳಗೆ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿರುವ ಇನ್ನೋರ್ವ ಆರೋಪಿಯ ಪತ್ತೆಗೆ ಕಡಬ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!