Wednesday, June 24, 2026
Homeಕರಾವಳಿಮಂಗಳೂರುಕಡಬ: ರೈಲಿನಡಿಗೆ ಸಿಲುಕಿ ವ್ಯಕ್ತಿ ಸಾವು

ಕಡಬ: ರೈಲಿನಡಿಗೆ ಸಿಲುಕಿ ವ್ಯಕ್ತಿ ಸಾವು

- Advertisement -
- Advertisement -

ಕಡಬ: ರೈಲಿನಡಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ಮೇ 24 ರಂದು ನಡೆದಿದೆ. ಕೋರಿಯರ್ ನಿವಾಸಿ ಚೋಮ ಮೃತ ದುರ್ದೈವಿ.

​ಬೆಂಗಳೂರು-ಮಂಗಳೂರು ರೈಲು ಮಾರ್ಗದ ಕೋರಿಯರ್ ಮೇಲ್ಸೇತುವೆಯ ಕೆಳಭಾಗದ ಹಳಿಯ ಮೇಲೆ ಮೃತದೇಹ ಪತ್ತೆಯಾಗಿದೆ. ಮುಂಜಾನೆ ಹಳಿಯ ಪಕ್ಕದಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕಡಬ ಪೊಲೀಸರು ಹಾಗೂ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

​ಚೋಮ ಅವರು ಮುಂಜಾನೆ ರೈಲು ಹಳಿ ದಾಟುವಾಗ ಆಕಸ್ಮಿಕವಾಗಿ ರೈಲು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆಯೇ? ಅಥವಾ ಇದರ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಸ್ಥಳೀಯ ವಲಯದಲ್ಲಿ ತೀವ್ರ ಗೊಂದಲ ಹಾಗೂ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!