Friday, July 31, 2026
HomeUncategorizedಕಡಬ: ಭಾರಿ ಗಾಳಿ-ಮಳೆಗೆ ಅಡಿಕೆ ಮರ ಬಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದುರಂತ ಸಾವು

ಕಡಬ: ಭಾರಿ ಗಾಳಿ-ಮಳೆಗೆ ಅಡಿಕೆ ಮರ ಬಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದುರಂತ ಸಾವು

- Advertisement -
- Advertisement -

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ-ಮಳೆಗೆ ದುರಂತವೊಂದು ಸಂಭವಿಸಿದ್ದು, ಅಡಿಕೆ ಮರ ಮುರಿದು ಬಿದ್ದು ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ.ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ (66) ಮೃತ ದುರ್ದೈವಿ.

ಶುಕ್ರವಾರ ಯಾದವ ಗೌಡ ಅವರು ತಮ್ಮ ಅಡಿಕೆ ತೋಟದಲ್ಲಿ ದೈನಂದಿನ ಕೆಲಸದಲ್ಲಿ ತೊಡಗಿದ್ದಾಗ ಏಕಾಏಕಿ ಭಾರಿ ಮಳೆ ಮತ್ತು ಬಿರುಗಾಳಿ ಪ್ರಾರಂಭವಾಗಿದೆ. ಈ ವೇಳೆ ಬಲವಾದ ಗಾಳಿಗೆ ಪಕ್ಕದಲ್ಲಿದ್ದ ಅಡಿಕೆ ಮರವೊಂದು ಯಾದವ ಗೌಡ ಅವರ ಮೇಲೆಯೇ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದ ಕೂಡಲೇ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಸ್ಥಳೀಯ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!