- Advertisement -
- Advertisement -
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಏಕಾಏಕಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಅರಣ್ಯ ಪ್ರದೇಶದಿಂದ ರಸ್ತೆಗೆ ನುಗ್ಗಿದ ಕಡವೆ ವೇಗವಾಗಿ ಬರುತ್ತಿದ್ದ ಕಾರಿಗೆ ಬಲವಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಕಡವೆ ಗಂಭೀರ ಗಾಯಗೊಂಡು ಅಂಕೊರೆಚಾಚಿ ಮೃತಪಟ್ಟಿದೆ. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಡವೆಯ ಕಳೇಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -


