Saturday, June 6, 2026
Homeತಾಜಾ ಸುದ್ದಿಕಡಬ: ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತವಾಗಿ ಮಕ್ಕಳಿಗೆ ಗಾಯವಾದ ಪ್ರಕರಣ; ಜಿ.ಪಂ.ಇಂಜಿನಿಯರ್ ಹಾಗೂ...

ಕಡಬ: ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತವಾಗಿ ಮಕ್ಕಳಿಗೆ ಗಾಯವಾದ ಪ್ರಕರಣ; ಜಿ.ಪಂ.ಇಂಜಿನಿಯರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು

- Advertisement -
- Advertisement -

ಕಡಬ: ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತವಾಗಿ ಮಕ್ಕಳಿಗೆ ಗಾಯವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿ.ಪಂ.ಇಂಜಿನಿಯರ್ ಸಂಗಪ್ಪ ಹುಕ್ಕೇರಿ  ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ಅಮಾನತು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶ ನೀಡಿದ್ದಾರೆ.

 ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ಏಳನೇ ತರಗತಿ ವಿದ್ಯಾರ್ಥಿಗಳಾದ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂಬವರು ಗಾಯಗೊಂಡಿದ್ದರು. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ.

ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ್ ತೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ.  ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಸಿದ ಕಟ್ಟಡವು ಸರಿಸುಮಾರು 50 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಸರಿಯಾದ ಅಡಿಪಾಯವನ್ನು ಹೊಂದಿಲ್ಲ, ಇದು ಕುಸಿತಕ್ಕೆ ಕಾರಣವಾಗಿರಬಹುದು.ಕಟ್ಟಡದ ದುಸ್ಥಿತಿಯ ಅರಿವಿದ್ದರೂ ತರಾತುರಿಯಲ್ಲಿ ಕಾಮಗಾರಿ ಆರಂಭಿಸಿರುವುದು ಸ್ಥಳೀಯರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು.

- Advertisement -

Latest News

error: Content is protected !!