Wednesday, June 3, 2026
Homeಕರಾವಳಿಕಡಬ; ಕೋರ್ಟ್ ಗೆ ಹಾಜರಾಗದೇ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ; ಕೋರ್ಟ್ ಗೆ ಹಾಜರಾಗದೇ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಕಡಬ; ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ  ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ.

ಆರೋಪಿಯನ್ನುಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!