Monday, June 15, 2026
Homeಕರಾವಳಿಮಂಗಳೂರುಕಡಬ; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಕಡಬ; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಕಡಬ; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ನಡೆದಿದೆ. ಹಾಸನ ಅರಕಲಗೂಡು ನಿವಾಸಿಗಳಾದ ವಾಹನದ ಚಾಲಕ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಬಂಧಿತರು.

ಆರೋಪಿಗಳು ಯಾವುದೇ ಪರವಾನಗಿ ಇಲ್ಲದೇ 02 ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದ್ದು, ವಾಹನ ಆಯತಪ್ಪಿ ಬಿದ್ದಾಗ ಜಾನುವಾರುಗಳನ್ನು ವಾಹನದಿಂದ ಇಳಿಸಿ ಓಡಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದ ಸ್ವಲ್ಪ ದೂರದಲ್ಲಿ  02 ಜಾನುವಾರುಗಳನ್ನು ಪತ್ತೆಮಾಡಲಾಗಿದ್ದು, ಕೃತ್ಯಕ್ಕೆ ಬಳಸಿದ ವಾಹನ, 02 ಜಾನುವಾರುಗಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ,ಕ್ರ 21/2025 ಕಲಂ;4,5,7,12 ಕರ್ನಾಟಕ ಗೋವುಗಳ ಸಂರಕ್ಷಣಾ & ಜಾನುವಾರು ಪ್ರತಿಬಂಧಕ ಕಾಯ್ದೆ-2020, ಕಲಂ:11(1)(D) ಪ್ರಾಣಿ ಸಂರಕ್ಷಣಾ ಕಾಯ್ದೆ-1960 & ಕಲಂ:66,192(A) ಭಾರತೀಯ ಮೋಟಾರು ವಾಹನ ಕಾಯ್ದೆ-1988 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!