- Advertisement -
![]()
- Advertisement -
ಕಡಬ: ಬೈಕ್ ಸವಾರನಿಗೆ ಕಾಡಾನೆ ಎದುರಾದ ಘಟನೆ ಕಡಬ ತಾಲೂಕಿನ ಕೊಂಬಾರು ಕೊಲ್ಪೆ ಮಿತ್ತಬೈಲು ರಸ್ತೆಯಲ್ಲಿ ನಡೆದಿದೆ. ಗುರುವಾರ ಸಂಜೆ ವಿನಯ್ ಅಗರಿ ಎಂಬವರು ಆನೆಯಿಂದ ಕೂದಲೆಳೆಯ ಅಂತರದಲ್ಲಿ ಪಾರಾದವರು.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. “ಕೇವಲ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರೆ ಸಾಲದು, ಕಾಡಾನೆಗಳ ನಿಯಂತ್ರಣಕ್ಕೆ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯ ವಿರುದ್ಧ ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಎದುರಾದೀತು,” ಎಂದು ಸ್ಥಳೀಯ ನಿವಾಸಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.
- Advertisement -


