Wednesday, June 26, 2024
Homeಕರಾವಳಿಮಂಗಳೂರುಕಡಬ; ವಿದ್ಯುತ್ ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಸಾವು

ಕಡಬ; ವಿದ್ಯುತ್ ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಸಾವು

spot_img
- Advertisement -
- Advertisement -

ಕಡಬ; ವಿದ್ಯುತ್ ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಎಡಮಂಗಲ ಬಳಿ ನಡೆದಿದೆ.

ಎಡಮಂಗಲ ಗ್ರಾಮದ ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯುತ್ ಆಫ್ ಮಾಡಿ ಕೆಲಸ ನಿರ್ವಹಿಸಲಾಗುತ್ತಿದ್ದು ವಿದ್ಯುತ್ ಶಾಕ್ ನಿಂದ ಬಿದ್ದಿರುವುದೇ ಎಂಬ ಸಂಶಯ ಮೂಡಿದೆ. ಅಲ್ಲದೆ ಈ ಭಾಗದಲ್ಲಿ ಸಿಡಿಲು ಬಂದಿದ್ದು ಇದರಿಂದ ಏನಾದರೂ ಅನಾಹುತ ಸಂಭವಿಸಿತೆ ಅನ್ನೋ ಅನುಮಾನವಿದೆ.

- Advertisement -
spot_img

Latest News

error: Content is protected !!