- Advertisement -


- Advertisement -
ಕಡಬ: ಪ್ರೀತಿಸುವಂತೆ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ್ದಲ್ಲದೆ, ಆಕೆಯ ಕುಟುಂಬಕ್ಕೆ ಕೊಲೆ ಹಾಗೂ ಆತ್ಮಹತ್ಯೆಯ ಬೆದರಿಕೆಯೊಡ್ಡಿದ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
18 ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಬರುವಾಗ ಸಂಬಂಧಿ ಪದ್ಮನಾಭ ನಿರಂತರವಾಗಿ ಹಿಂಬಾಲಿಸುತ್ತಿದ್ದ. ಕುಟುಂಬಸ್ಥರು ಎಚ್ಚರಿಕೆ ನೀಡಿದ್ದರೂ ಜುಲೈ 29 ಮತ್ತು ಆಗಸ್ಟ್ 10ರಂದು ಮನೆ ಬಳಿ ಬಂದು ಕೊಲೆ ಬೆದರಿಕೆಯೊಡ್ಡಿದ್ದನು. ಈ ಕುರಿತು ಸಂತ್ರಸ್ತೆ ನೀಡಿದ ದೂರಿನಂತೆ ಕಡಬ ಪೊಲೀಸರು BNS ಕಾಯ್ದೆಯಡಿ ಪ್ರಕರಣ (ಅಪರಾಧ ಸಂಖ್ಯೆ: 96/2026) ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -


