Thursday, June 4, 2026
Homeಕರಾವಳಿಕಡಂದಲೆ : ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಕಡಂದಲೆ : ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು : ಕ್ವಾರಂಟೈನ್ ನಲ್ಲಿ ಇದ್ದ ವ್ಯಕ್ತಿಯೊಬ್ಬರು ಮೇ.21 ರ ಗುರುವಾರ ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯ ಕಡಂದಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಧನಂಜಯ್ ಪೂಜಾರಿ ಎಂದು ಗುರುತಿಸಲಾಗಿದೆ. ಹೋಟೆಲ್ ಕಾರ್ಮಿಕರಾಗಿದ್ದ ಇವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಮೂಡಬಿದ್ರಿ ಸಮೀಪದ ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕ್ವಾರಂಟೈನ್ ನಲ್ಲಿ ಇನ್ನೂ ಹಲವರಿದ್ದು, ಅವರನ್ನು ಬೇರೆ ಕಡೆ ಸ್ಥಳಾಂತರಿಸಲಾಗುವುದು ಎಂದು ವರದಿಯಾಗಿದೆ.
ಸ್ಥಳಕ್ಕೆ ಉಪವಿಭಾಗಧಿಕಾರಿ ಮದನ ಮೋಹನ್ ಸಿ ಭೇಟಿ ನೀಡಿದ್ದಾರೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!