Friday, June 5, 2026
Homeತಾಜಾ ಸುದ್ದಿಬಿಜೆಪಿಯ ಹಿರಿಯ ನಾಯಕ ಕೈಲಾಶ್ ನಾರಾಯಣ್ ಸಾರಂಗ್ ಇನ್ನಿಲ್ಲ

ಬಿಜೆಪಿಯ ಹಿರಿಯ ನಾಯಕ ಕೈಲಾಶ್ ನಾರಾಯಣ್ ಸಾರಂಗ್ ಇನ್ನಿಲ್ಲ

- Advertisement -
- Advertisement -

ಭೋಪಾಲ್: ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಅವರು ವಿಧಿವಶರಾಗಿದ್ದಾರೆ. ಕೈಲಾಶ್ ಸಾಂರಗ್ ಅವರ ಸಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಧ್ಯಪ್ರದೇಶದಾದ್ಯಂತ ಬಿಜೆಪಿ ಪಕ್ಷವನ್ನು ಬಲಪಡಿಸಲು ಸಾಕಷ್ಟು ಶ್ರಮ ಪಟ್ಟಿದ್ದ ಕೈಲಾಶ್ ನಾರಾಯಣ್ ಸಾರಂಗ್ ಅವರು ಕೆಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.ಕೈಲಾಶ್ ಸಾರಂಗ್ ಅವರು ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!