Friday, June 5, 2026
Homeಮನರಂಜನೆಗಂಡು ಮಗುವಿಗೆ ಜನ್ಮ ನೀಡಿದ ನಟಿ ಕಾಜಲ್ ಅಗರವಾಲ್

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಕಾಜಲ್ ಅಗರವಾಲ್

- Advertisement -
- Advertisement -

ಮುಂಬೈ: ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಮೊದಲ ಮಗುವನ್ನು ಸ್ವಾಗತಿಸಿದ ಕಾಜಲ್ ಮತ್ತು ಗೌತಮ್ ದಂಪತಿಗೆ ಅಭಿಮಾನಿಗಳು ಮತ್ತು ಆಪ್ತರು ಶುಭಹಾರೈಸುತ್ತಿದ್ದಾರೆ. ಕಾಜಲ್ ಮಗುವಿಗೆ ಜನ್ಮ ನೀಡಿದ ಬಗ್ಗೆ ನಟಿಯಾಗಲಿ ಅಥವಾ ಪತಿ ಗೌತಮ್ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ತುಂಬು ಗರ್ಭಿಣಿಯಾಗಿದ್ದ ಕಾಜಲ್ ಬೇಬಿ ಬಂಪ್ ಫೋಟೋಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಕಾಜಲ್ ಬೇಬಿ ಬಂಪ್ ಫೋಟೋಗಳನ್ನು ಶೇರ್ ಮಾಡುತ್ತಿದ್ದರು. ಇತ್ತೀಚಿಗಷ್ಟೆ ಸೀಮಂತ ಸಮಾರಂಭ ನೆರವೇರಿದ್ದು ಸೀಮಂತದ ಸುಂದರ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

- Advertisement -

Latest News

error: Content is protected !!