Monday, June 8, 2026
Homeಕರಾವಳಿಮಂಗಳೂರುಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ...

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜ ಚರ್ಚೆ

- Advertisement -
- Advertisement -

ಬೆಳ್ತಂಗಡಿ:ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DFO), ಮಂಗಳೂರು ವಿಭಾಗ ಅವರನ್ನು ಶಿಶಿಲ ಗ್ರಾಮಸ್ಥರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದರೂ, ಭೂಮಿಗೆ ಸಂಬಂಧಿಸಿದ ಅರಣ್ಯ ಇಲಾಖೆಯ ತೊಡಕುಗಳಿಂದ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕಾನೂನುಬದ್ಧವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ಸಭೆಯಲ್ಲಿ ಗ್ರಾಮಸ್ಥರು ಎದುರಿಸುತ್ತಿರುವ ಭೂಮಿ ಸಂಬಂಧಿತ ತೊಂದರೆಗಳು, ದಾಖಲೆಗಳ ಸಮಸ್ಯೆ ಹಾಗೂ ಅರಣ್ಯ ಇಲಾಖೆಯಿಂದ ಉಂಟಾಗಿರುವ ಗೊಂದಲಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕೋರಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.

- Advertisement -

Latest News

error: Content is protected !!